ಕೆ.ಕೆ.ಆರ್.ಟಿ.ಸಿ ಬಸ್‌ಗೆ ಸಿದ್ದರಾಮಯ್ಯ ಪೂಜೆ
ವಿಜಯಪುರ, 14 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉ
ಸಿಎಂ


ವಿಜಯಪುರ, 14 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿದರು.

ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರ ಅಧ್ಯಕ್ಷತೆಯ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವಾನಂದ ಎಸ್.ಪಾಟೀಲ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವು ಮಂದಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande