ವಿಜಯಪುರ, 14 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಅಂಗವಾಗಿ ಜುಲೈ 15 ರಂದು ಮಂಗಳವಾರ ಉಚಿತ ಪ್ಲಾಸ್ಟಿಕ್ ಸರ್ಜರಿ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಈ ಶಿಬಿರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.
ಪ್ಲಾಸ್ಟಿಕ್ ಸರ್ಜರಿ ತಜ್ಞ ವೈದ್ಯರಾದ ಡಾ. ವಿಜಯಕುಮಾರ ಹುಡೇದ ಮತ್ತು ಡಾ. ಅನಿಕೇತನ ವಲ್ಲಭ ಶಿಬಿರದ ಸಂಚಾಲಕರಾಗಿರುತ್ತಾರೆ.
ವಿಜಯಪುರ ಮತ್ತು ನೆರೆಯ ಜಿಲ್ಲೆಗಳ ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯಬೇಕು ಎಂದು ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande