ಹೊಸಪೇಟೆ : ಗ್ಯಾರಂಟಿ ಶಕ್ತಿ ಯೋಜನೆಯ ಯಶಸ್ವಿಗೆ ಸಂಭ್ರಮಾಚರಣೆ
ಹೊಸಪೇಟೆ, 14 ಜುಲೈ (ಹಿ.ಸ.) : ಆ್ಯಂಕರ್ : ಶಕ್ತಿ ಯೋಜನೆಯಡಿ ರಾಜ್ಯಾದ್ಯಾಂತ 500 ಕೋಟಿ ಮಹಿಳೆಯರು ಸಾರಿಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿರುವುದು ಸ್ತ್ರೀಸ್ವಾವಲಂಬಿ ಕನಸುಗಳನ್ನು ನನಸಾಗಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಶಾಸಕ ಹೆಚ್.ಆರ್.ಗವಿಯಪ್
ಹೊಸಪೇಟೆ : ಗ್ಯಾರಂಟಿ ಶಕ್ತಿ ಯೋಜನೆಯ ಯಶಸ್ವಿಗೆ ಸಂಭ್ರಮಾಚರಣೆ.


ಹೊಸಪೇಟೆ : ಗ್ಯಾರಂಟಿ ಶಕ್ತಿ ಯೋಜನೆಯ ಯಶಸ್ವಿಗೆ ಸಂಭ್ರಮಾಚರಣೆ.


ಹೊಸಪೇಟೆ : ಗ್ಯಾರಂಟಿ ಶಕ್ತಿ ಯೋಜನೆಯ ಯಶಸ್ವಿಗೆ ಸಂಭ್ರಮಾಚರಣೆ.


ಹೊಸಪೇಟೆ, 14 ಜುಲೈ (ಹಿ.ಸ.) :

ಆ್ಯಂಕರ್ : ಶಕ್ತಿ ಯೋಜನೆಯಡಿ ರಾಜ್ಯಾದ್ಯಾಂತ 500 ಕೋಟಿ ಮಹಿಳೆಯರು ಸಾರಿಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿರುವುದು ಸ್ತ್ರೀಸ್ವಾವಲಂಬಿ ಕನಸುಗಳನ್ನು ನನಸಾಗಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಅವರು ಹೇಳಿದ್ದಾರೆ.

ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಶಕ್ತಿ ಯೋಜನೆಯಡಿಯಲ್ಲಿ 500 ಕೋಟಿ ಉಚಿತ ಟಿಕೆಟ್‍ಗಳನ್ನು ವಿತರಿಸಿದ ಸಂಭ್ರಮಾಚಾರಣೆಯಲ್ಲಿ ಭಾಗವಹಿಸಿ ಅವರು ಸೋಮವಾರ ಮಾತನಾಡಿದರು, ಪಂಚ ಗ್ಯಾರಂಟಿ ಯೋಜನೆಯಲ್ಲಿ ಪ್ರಮುಖವಾಗಿ ಮಹಿಳೆಯರನ್ನು ಕೇಂದ್ರವಾಗಿಸಿ ಉಚಿತವಾಗಿ ಕರ್ನಾಟಕ ಸಾರಿಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ನೀಡಿದ್ದ ಭರವಸೆ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ನಡೆಯುತ್ತ ಬಂದಿದೆ.

ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಟ್ಟು 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, ಪ್ರಯಾಣದ ಒಟ್ಟು ಮೊತ್ತ 12,669 ಕೋಟಿ ರೂಗಳು ಶಕ್ತಿ ಯೋಜನೆಗೆ ಈವರೆಗೆ ವಿನಿಯೋಗಿಸಲಾಗಿದೆ. ಶಕ್ತಿ ಯೋಜನೆ ಸಮರ್ಪಕವಾಗಿ ಬಳಕೆಯಾಗಿದೆ. ಸಾರಿಗೆ ಇಲಾಖೆಗೆ ಪರೋಕ್ಷವಾಗಿ ಶಕ್ತಿ ನೀಡಿದ ಯೋಜನೆ ಇದಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಒಟ್ಟು 7.28 ಕೋಟಿ ಮಹಿಳೆಯರು ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ ಶುಲ್ಕ ಭರಿಸುವ ಮೂಲಕ ಯೋಜನೆಯನ್ನು ಸಕ್ರಿಯವಾಗಿಸಿದೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಮಾತನಾಡಿ. ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಶಕ್ತಿ ಯೋಜನೆ ಮುಖ್ಯವಾಗಿದೆ. ಯೋಜನೆಯು ಎರಡು ವರ್ಷಗಳ ಪೂರೈಸಿ ಮಹಿಳೆಯರು ಉಚಿತವಾಗಿ 500 ಕೋಟಿ ದರದಲ್ಲಿ ಪ್ರಯಾಣಿಸಿ ಲಾಭವನ್ನು ಪಡೆದುಕೊಂಡಿದ್ದಾರೆ. ಹಾಗಾಗೀ ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ಘಟಕಗಳಲ್ಲಿ ಬಸ್‍ಗಳನ್ನು ಸಿಂಗರಿಸುವ ಮೂಲಕ ಪರಸ್ಪರ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಆಚರಿಸಲಾಗುತ್ತಿದೆ.

ಪಂಚ ಗ್ಯಾರಂಟಿಗಳನ್ನು ಸಮಪರ್ಕವಾಗಿ ಜನರಿಗೆ ತಲುಪಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಸೇರಿದಂತೆ ರಾಜ್ಯದ ಎಲ್ಲಾ ಸಚಿವರು ಶ್ರಮಿಸಿದ್ದಾರೆ. ಶಕ್ತಿ ಯೋಜನೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಉದ್ಯೋಗಿ ಮಹಿಳೆಯರು ಸೇರಿದಂತೆ ವಯೋವೃದ್ಧರು, ಬಡಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಮೂಲಕ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ ಎಂದರು.

ಈ ವೇಳೆ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದ ನಿಯಾಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ, ವಿಭಾಗೀಯ ತಾಂತ್ರಿಕ ಅಧಿಕಾರಿ ಜಿ.ನಾಗರಾಜ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande