ನಿಷೇಧಿತ ಮೆಡಿಸನ್ ಡ್ರಗ್ಸ್ ಮಾರಾಟ ಆರೋಪ : ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಬಂಧನ
ಕಲಬುರಗಿ, 14 ಜುಲೈ (ಹಿ.ಸ.) : ಆ್ಯಂಕರ್ : ಮೆಡಿಸನ್ ಡ್ರಗ್ಸ್ (ಮಾದಕದ್ರವ್ಯ) ಸಾಗಾಟದ ಆರೋಪದ ಮೇಲೆ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನ ಮಹಾರಾಷ್ಟ್ರ ಪೊಲೀಸರು ಬಂದಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಆಪ್ತನಾಗಿ ಗುರುತಿಸಿಕೊಂಡಿದ್ದ ಲಿಂಗರಾಜ್ ಕಣ್ಣಿಯನ್ನು
ನಿಷೇಧಿತ ಮೆಡಿಸನ್ ಡ್ರಗ್ಸ್ ಮಾರಾಟ ಆರೋಪ । ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಬಂಧನ


ಕಲಬುರಗಿ, 14 ಜುಲೈ (ಹಿ.ಸ.) :

ಆ್ಯಂಕರ್ : ಮೆಡಿಸನ್ ಡ್ರಗ್ಸ್ (ಮಾದಕದ್ರವ್ಯ) ಸಾಗಾಟದ ಆರೋಪದ ಮೇಲೆ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನ ಮಹಾರಾಷ್ಟ್ರ ಪೊಲೀಸರು ಬಂದಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಆಪ್ತನಾಗಿ ಗುರುತಿಸಿಕೊಂಡಿದ್ದ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರದ ಕಲ್ಯಾಣ ಪೊಲೀಸರಿಂದ ಬಂಧನವಾಗಿದೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ 120 ಕೊಡೆನೈನ್ ಸಿರಪ್ ಹೊಂದಿದ್ದರು ಎನ್ನುವ ಆರೋಪದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಮೆಡಿಷನ್ ಡ್ರಗ್ಸ್ (ಮಾದಕದ್ರವ್ಯ) ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎನ್.ಡಿ.ಪಿ.ಎಸ್ ಕಾಯ್ದೆಯಡಿ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತನಾಗಿ ಕಾಂಗ್ರೆಸ್ ಹಾಗು ಸರ್ಕಾರದ ಕಾರ್ಯಕ್ರಮಗಳಲ್ಲಿ ಲಿಂಗರಾಜ್ ಕಣ್ಣಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಈಗ ಅಕ್ರಮ ಮಾದಕ ದ್ರವ್ಯ ಮಾರಾಟದ ಆರೋಪದಲ್ಲಿ ಬಂಧನವಾಗಿದ್ದು, ಕಾಂಗ್ರೆಸ್ ನಾಯಕರಲ್ಲಿ ಇರುಸುಮುರಿಸು ಉಂಟು ಮಾಡಿದೆ.

ಹಿಂದೂಸ್ತಾನ್ ಸಮಾಚಾರ್ / ಪ್ರಿಯಾಂಕಾ ಹೊಸಮನಿ


 rajesh pande