ಲಕ್ನೋ, 14 ಜುಲೈ (ಹಿ.ಸ.) :
ಆ್ಯಂಕರ್ : ಬಿಹಾರದ ಸಮ್ಮಿಶ್ರ ಸರ್ಕಾರದ ವಿರುದ್ಧ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಅವರು ಆರೋಪಿಸಿದ್ದಾರೆ.
ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರತಿಕ್ರಿಯೆ ನೀಡಿರುವ ಮಾಯಾವತಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿರುವ ಒಂದು ಕೋಟಿ ಉದ್ಯೋಗ ಭರವಸೆ , ಜನರ ಭಾವನೆಗಳನ್ನು ಬಳಸಿಕೊಳ್ಳುವ ರಾಜಕೀಯದ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.
“ಇದು ಅಚ್ಛೇ ದಿನ್ ಮಾದರಿಯ ಘೋಷಣೆ ಮಾತ್ರ. ಈಗಾಗಲೇ ಹಲವಾರು ಬಾರಿ ಈ ರೀತಿ ಭರವಸೆಗಳನ್ನು ನೀಡಿ ಜನರನ್ನು ಮೋಸಗೊಳಿಸಲಾಗಿದೆ,” ಎಂದು ಅವರು ಟೀಕಿಸಿದ್ದಾರೆ. ಬಿಹಾರದ ಜನರು ಈಗ ಸಾಕ್ಷಾತ್ ಅನುಭವದ ಮೂಲಕ ಇಂತಹ ಸುಳ್ಳು ಘೋಷಣೆಗಳನ್ನು ಅರಿತಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಾಯಾವತಿ ಅವರು ಚುನಾವಣಾ ಪ್ರಕ್ರಿಯೆಯು ಸ್ವತಂತ್ರ ಮತ್ತು ನ್ಯಾಯಯುತವಾಗಿರಬೇಕು, ದುರ್ಬಲ್, ಶ್ರಮಿಕ ವರ್ಗದ ಜನರಿಗೆ ಸರಿಯಾದ ಮತದಾನದ ಅವಕಾಶ ಸಿಗಬೇಕು ಎಂದು ಒತ್ತಾಯಿಸಿದ್ದು. ಚುನಾವಣೆಗಳಲ್ಲಿ ತೋಳುಬಲ, ಹಣಬಲ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಅವಕಾಶವಿಲ್ಲದಂತೆ ಚುನಾವಣಾ ಆಯೋಗ ಕ್ರಮ ವಹಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa