ಹಾಸನ, 14 ಜುಲೈ (ಹಿ.ಸ.) :
ಆ್ಯಂಕರ್ : ರೈತರ ಬೆಳೆ ನಷ್ಟಕ್ಕೆ ಪರಿಹಾರ ಸಿಗುವಂತೆ ಕಡ್ಡಾಯವಾಗಿ ವಿಮೆ ಭರ್ತಿ ಮಾಡಿಸಲು ಕ್ರಮ ವಹಿಸಬೇಕೆಂದು ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಣ್ಣಿನ ಗುಣಮಟ್ಟ ಸಂರಕ್ಷಣೆ, ಪರ್ಯಾಯ ಬೆಳೆಗಳಿಗೆ ಪ್ರೋತ್ಸಾಹ, ಕುಡಿಯುವ ನೀರಿನ ಮಾದರಿ ಪರಿಶೀಲನೆ, ಆಹಾರ ಸುರಕ್ಷತೆ, ಶಾಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಹಾಗೂ ಸಾರ್ವಜನಿಕ ಅರ್ಜಿಗಳ ತ್ವರಿತ ವಿಲೇವಾರಿ ಕುರಿತು ಸೂಚನೆ ನೀಡಿದರು.
ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿ.ಎನ್. ಬಾಲಕೃಷ್ಣ ಸೇರಿದಂತೆ ಹಲವಾರು ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa