AI-171 ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿಲ್ಲ: ಏರ್ ಇಂಡಿಯಾ ಸಿಇಒ ಸ್ಪಷ್ಟನೆ
ನವದೆಹಲಿ, 14 ಜುಲೈ (ಹಿ.ಸ.) : ಆ್ಯಂಕರ್ : ಕಳೆದ ಜೂನ್ 12 ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ AI-171 ವಿಮಾನ ಅಪಘಾತದ ಕುರಿತು ಪ್ರಾಥಮಿಕ ತನಿಖಾ ವರದಿ ಪ್ರಕಟವಾದ ಬೆನ್ನಲ್ಲೇ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ಯಾಂಪ್‌ಬೆಲ್ ವಿಲ್ಸನ್ ಪ್ರತಿಕ್ರಿಯೆ ನೀಡಿದ್ದು, ವಿಮಾನದಲ್ಲಿ ಯಾ
Air india


ನವದೆಹಲಿ, 14 ಜುಲೈ (ಹಿ.ಸ.) :

ಆ್ಯಂಕರ್ : ಕಳೆದ ಜೂನ್ 12 ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ AI-171 ವಿಮಾನ ಅಪಘಾತದ ಕುರಿತು ಪ್ರಾಥಮಿಕ ತನಿಖಾ ವರದಿ ಪ್ರಕಟವಾದ ಬೆನ್ನಲ್ಲೇ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ಯಾಂಪ್‌ಬೆಲ್ ವಿಲ್ಸನ್ ಪ್ರತಿಕ್ರಿಯೆ ನೀಡಿದ್ದು, ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ನೀಡಿದ ಪ್ರಾಥಮಿಕ ವರದಿಯು ವಿಮಾನದ ಎಂಜಿನ್ ಅಥವಾ ನಿರ್ವಹಣೆಯಲ್ಲಿ ಯಾವುದೇ ತೊಂದರೆ ಕಂಡುಬಂದಿಲ್ಲ ಎಂದು ಹೇಳಿದೆ. ಟೇಕ್ ಆಫ್ ಸಂದರ್ಭದಲ್ಲಿ ವಿಮಾನದ ಇಂಧನ ಗುಣಮಟ್ಟ ಹಾಗೂ ಕಾರ್ಯಾಚರಣೆಯಲ್ಲೂ ಅಸಾಮಾನ್ಯತೆ ಇಲ್ಲ ಎಂಬುದೂ ವರದಿಯಿಂದ ಹೊರಹೊಮ್ಮಿದೆ.

ವಿಲ್ಸನ್ ಅವರು ಉದ್ಯೋಗಿಗಳಿಗೆ ಕಳುಹಿಸಿದ ಆಂತರಿಕ ಇ-ಮೇಲ್‌ನಲ್ಲಿ, ಪೈಲಟ್‌ಗಳು ಬ್ರೀಥಲೈಜರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿಯೂ ಯಾವುದೇ ಆತಂಕದ ವಿಷಯವಿಲ್ಲ, ಎಂದು ತಿಳಿಸಿದ್ದಾರೆ. ತನಿಖೆ ಇನ್ನೂ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ತಾತ್ಕಾಲಿಕ ತೀರ್ಮಾನಗಳನ್ನು ಮಾಡಬಾರದು ಎಂದು ಸಿಬ್ಬಂದಿಗೆ ಮನವಿ ಮಾಡಿದ್ದಾರೆ.

AI-171 ವಿಮಾನವು ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅದು ಪತನಗೊಂಡು ಭೀಕರ ದುರಂತಕ್ಕೆ ಕಾರಣವಾಯಿತು. ಈ ಅಪಘಾತದಲ್ಲಿ 260 ಪ್ರಯಾಣಿಕರು ಪ್ರಾಣ ಕಳೆದುಕೊಂಡರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande