ಬೆಂಗಳೂರು, 14 ಜುಲೈ (ಹಿ.ಸ.) :
ಆ್ಯಂಕರ್ : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಡಾ. ಬಿ. ಸರೋಜಾ ದೇವಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ತಮ್ಮ ನಿವಾಸದಲ್ಲಿಯೇ ಕೊನೆಯುಸಿರೆಳೆದರು.
ಭಾರತೀಯ ಚಿತ್ರರಂಗದಲ್ಲಿ 60ಕ್ಕೂ ಹೆಚ್ಚು ವರ್ಷಗಳ ಕಾಲ ಅವರು ಶ್ರೇಷ್ಠ ಅಭಿನಯ ತೋರಿದವರು. ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲೂ ಅಭಿನಯಿಸಿ, ದಕ್ಷಿಣ ಭಾರತದ ಪ್ರಥಮ ಸೂಪರ್‌ಸ್ಟಾರ್ ಆಗಿ ಗುರುತಿಸಿಕೊಂಡಿದ್ದರು.
2019ರಲ್ಲಿ ತೆರೆ ಕಂಡ ಪುನೀತ್ ರಾಜ್‌ಕುಮಾರ್ ನಟನೆಯ ನಟಸಾರ್ವಭೌಮ ಚಿತ್ರ, ಇದು ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು.
ರಾಷ್ಟ್ರಪತಿಗಳಿಂದ ಪದ್ಮಭೂಷಣ ಸೇರಿದಂತೆ ಅನೇಕ ಗೌರವಗಳು ಪಡೆದಿರುವ ಅವರು,
ಶಿವಾಜಿ ಗಣೇಶನ್, ಎನ್‌ಟಿ ರಾಮಾರಾವ್, ರಾಜ್‌ಕುಮಾರ್, ಎಂ.ಜಿ.ಆರ್ ಅವರ ಜೊತೆ ಮುಖ್ಯ ನಾಯಕಿಯಾಗಿ ಅಭಿನಯಿಸಿದ್ದರು.
ಸರೋಜಾ ದೇವಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಅವರ ನಿಧನದಿಂದ ಭಾರತೀಯ ಚಿತ್ರರಂಗ, ವಿಶೇಷವಾಗಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳು ಅಪಾರ ಶೋಕದಲ್ಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa