ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಹೊಸಪೇಟೆ, 15 ಜುಲೈ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಕೊಟ್ಟೂರು, ಕೂಡ್ಲಿಗಿ ಮತ್ತು ಹೊಸಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅನ್‍ಲೈನ್ ಮೂಲಕ ಅರ್ಜಿ ಅಹ್ವಾನ
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ


ಹೊಸಪೇಟೆ, 15 ಜುಲೈ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಕೊಟ್ಟೂರು, ಕೂಡ್ಲಿಗಿ ಮತ್ತು ಹೊಸಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಕೂಡ್ಲಿಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ವರ್ಗದ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. https://shp.Karnataka.gov.in ವೆಬ್‍ಸೈಟ್ ಮೂಲಕ ಅಗಸ್ಟ್ 14 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.Karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpine@gmail.com ಇ-ಮೇಲ್ ಮುಖಾಂತರ ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಕೂಡ್ಲಿಗಿಯಲ್ಲಿ ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ 08391-220583, 8050770004 ಮತ್ತು 8050770005 ಸಂಖ್ಯೆಗಳಿಗೆ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande