ಬಳ್ಳಾರಿ, 15 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲೆಯು ಕಾಂಗ್ರೆಸ್‍ನ ಭದ್ರಕೋಟೆಯಾಗಿ ಮುಂದುವರಿಯಲಿದ್ದು, ಬಿಜೆಪಿ ಕಾಂಗ್ರೆಸ್ ಕೋಟೆಯನ್ನು ಪ್ರವೇಶಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ (ಕೆಪಿವೈಸಿಸಿ) ಅಧ್ಯಕ್ಷ ಎಚ್.ಎಸ್. ಮಂಜುನಾಥಗೌಡ ಅವರು ತಿಳಿಸಿದ್ದಾರೆ.
ಡಾ. ಜೋಳದರಾಶಿ ದೊಡ್ಡನಗೌಡರ ರಂಗಮಂದಿರಲ್ಲಿ ಮಂಗಳವಾರ ನಡೆದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಇತಿಹಾಸ, ಬಳ್ಳಾರಿ ಜಿಲ್ಲೆಯ ಸುಭದ್ರ ಕಾಂಗ್ರೆಸ್ ಕೋಟೆ, ಪಕ್ಷದ ಕಾರ್ಯಕರ್ತರು ಮತ್ತು ಕಾಂಗ್ರೆಸ್‍ನ ಮತದಾರರು ಸದಾಕಾಲ ಪಕ್ಷದೊಂದಿಗಿದ್ದಾರೆ ಎಂದರು.
ಬಳ್ಳಾರಿ ಜಿಲ್ಲೆಯಾದ್ಯಂತ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು ಜಿಲ್ಲೆಯ ಕಾಂಗ್ರೆಸ್‍ನ ಶಕ್ತಿ - ಸಾಮಥ್ರ್ಯಕ್ಕೆ ಸಾಕ್ಷಿಯಾಗಿದೆ. ಕಾರ್ಯಕರ್ತರು ಮತ್ತು ಕಾಂಗ್ರೆಸ್‍ನ ಯೋಜನೆಗಳು ಮತದಾರರನ್ನು ಪಕ್ಷದತ್ತ ಸೆಳೆದಿರುವುದಕ್ಕೆ ಯಶಸ್ಸು ಸಿಕ್ಕಿದೆ ಎಂದರು.
ಕಾಂಗ್ರೆಸ್ ಶಾಸಕರಾದ ನಾರಾ ಭರತರೆಡ್ಡಿ, ಬಿ. ನಾಗೇಂದ್ರ, ಜೆ.ಎನ್. ಗಣೇಶ್, ಎನ್.ಟಿ. ಶ್ರೀನಿವಾಸ್ ಅವರ ಮೇಲೆ ಬಿಜೆಪಿ ಇಡಿ ದಾಳಿ ನಡೆಸಿ, ದ್ವೇಷದ ರಾಜಕಾರಣ ನಡೆಸುತ್ತಿದೆ. ಗಣಿ ಹಗರಣದಲ್ಲಿ ಶಿಕ್ಷಿತನಾಗಿರುವ ಶಾಸಕ ಜಿ. ಜನಾರ್ದನರೆಡ್ಡಿ ಅವರನ್ನು ಬಿಜೆಪಿ ತಲೆಯಮೇಲೆ ಹೊತ್ತು ತಿರುಗಾಡುತ್ತಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್