ಮಂಗಳೂರು, 15 ಜುಲೈ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಉಳ್ಳಾಲ ಮತ್ತು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬಂಟ್ವಾಳ ತಾಲೂಕಿನ ಮತ್ತು ಉಳ್ಳಾಲ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಈ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa