ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಿದಲ್ಲಿ ದೂರು ಸಲ್ಲಿಸಿ
ಬಳ್ಳಾರಿ, 15 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಬೇಡಿಕೆಯನ್ವಯ ರಸಗೊಬ್ಬರಗಳು ಸರಬರಾಜು ಆಗುತ್ತಿದ್ದು, ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ರಸಗೊಬ್ಬರಗಳನ್ನು ವಿತರಿಸಲಾಗುತ್ತಿದೆ. ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿ
ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಿದಲ್ಲಿ ದೂರು ಸಲ್ಲಿಸಿ


ಬಳ್ಳಾರಿ, 15 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಬೇಡಿಕೆಯನ್ವಯ ರಸಗೊಬ್ಬರಗಳು ಸರಬರಾಜು ಆಗುತ್ತಿದ್ದು, ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ರಸಗೊಬ್ಬರಗಳನ್ನು ವಿತರಿಸಲಾಗುತ್ತಿದೆ.

ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿಂದ ಉಸ್ತುವಾರಿ ಮಾಡಲಾಗುತ್ತಿದ್ದು, ಕೃಷಿ ಪರಿಕರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಕೆ.ಎಂ. ಅವರು ತಿಳಿಸಿದ್ದಾರೆ.

ರೈತರು ರಸಗೊಬ್ಬರ ಖರೀದಿಸುವ ಸಮಯದಲ್ಲಿ ಮಾರಾಟಗಾರರು ಖರೀದಿ ಬಿಲ್‍ನ್ನು ನೀಡದೇ ಇದ್ದಲ್ಲಿ ಅಥವಾ ಕಳಪೆ ಗುಣಮಟ್ಟದ ರಸಗೊಬ್ಬರ ಕಂಡುಬಂದಲ್ಲಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande