ಚೀನಾ ಅಧ್ಯಕ್ಷರನ್ನು ಭೇಟಿ ಮಾಡಿದ ಜೈಶಂಕರ್
ಬೀಜಿಂಗ್, 15 ಜುಲೈ (ಹಿ.ಸ.) : ಆ್ಯಂಕರ್ : ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಮಂಗಳವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಶುಭಾಶಯಗಳನ್ನು ನೀಡಿದರು. ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಮಂತ್ರ
Jaishankar


ಬೀಜಿಂಗ್, 15 ಜುಲೈ (ಹಿ.ಸ.) :

ಆ್ಯಂಕರ್ : ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಮಂಗಳವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಶುಭಾಶಯಗಳನ್ನು ನೀಡಿದರು.

ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಮಂತ್ರಿಗಳ ಸಭೆಯಲ್ಲಿ ಭಾಗವಹಿಸಲು ಚೀನಾದ ಟಿಯಾಂಜಿನ್‌ಗೆ ಭೇಟಿ ನೀಡಿರುವ ಜೈಶಂಕರ್, ಇತರ ಸದಸ್ಯ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳೊಂದಿಗೆ ಚೀನಾ ಅಧ್ಯಕ್ಷರನ್ನು ಭೇಟಿಯಾದರು.

ಅವರ ಭೇಟಿ ವೇಳೆ, ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳ ಇತ್ತೀಚಿನ ಸಕಾರಾತ್ಮಕ ಪ್ರಗತಿಯ ಕುರಿತು ಮಾಹಿತಿ ನೀಡಿದರು. ನಮ್ಮ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯ ಬಗ್ಗೆ ಅಧ್ಯಕ್ಷ ಕ್ಸಿಗೆ ತಿಳಿಸಿದ್ದೇನೆ. ಗಡಿ ವಿಚಾರದಲ್ಲಿ ಶಾಂತಿ-ಸಮಾಧಾನ ಕಾಪಾಡಿ, ಕಾರ್ಯತಂತ್ರದ ಸಂವಾದ ಮುಂದುವರೆಯಬೇಕು, ಎಂದು ಜೈಶಂಕರ್ ಎಕ್ಸನಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande