ಬೆಂಗಳೂರು, 15 ಜುಲೈ (ಹಿ.ಸ.) :
ಆ್ಯಂಕರ್ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು.
ಮೂವರನ್ನು ಸುರಕ್ಷಿತವಾಗಿ ಕರೆತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಿದರು.
ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa