ಅಂಚೆ ಜೀವ ವಿಮೆ ಮಾರಾಟ : ನೇರ ಪ್ರತಿನಿಧಿಗಳ ನೇಮಕ, ನೇರ ಸಂದರ್ಶನ
ವಿಜಯಪುರ, 15 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರ
ಅಂಚೆ ಜೀವ ವಿಮೆ ಮಾರಾಟ : ನೇರ ಪ್ರತಿನಿಧಿಗಳ ನೇಮಕ, ನೇರ ಸಂದರ್ಶನ


ವಿಜಯಪುರ, 15 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ದಿನಾಂಕ: 18-07-2025 ರಂದು ಬೆಳಿಗ್ಗೆ 11-00ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಗೋಲ್ ಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು 5,000 ರೂ.ಗಳ ರಾಷ್ಟಿçÃಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇರಿಸಬೇಕು. ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರುವ ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಆಯಾ ಇಲಾಖೆಗೆ ಸಂಬಂಧಿಸಿದಂತೆ ಸೂಕ್ತ ಕಮಿಷನ್ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಅಥವಾ ಅಂಜೆ ವಿಮಾ ಅಭಿವೃದ್ಧಿ ಅಧಿಕಾರಿ ಮೊಬೈಲ್ ; 8971127772 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande