ಸಂಡೂರು : ಜುಲೈ 28ರಂದು `ನಿಧಿ ಆಪ್ಕೆ ನಿಕಟ್’
ಬಳ್ಳಾರಿ, 15 ಜುಲೈ (ಹಿ.ಸ.) : ಆ್ಯಂಕರ್ : ಕಾರ್ಮಿಕರ ಭವಿಷ್ಯ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಅಂಶದಡಿ ‘ನಿಧಿ ಆಪ್ಕೆ ನಿಕಟ್’ ಜುಲೈ 28 ರ ಸೋಮವಾರ ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಸಂಡೂರು ತಾಲ್ಲೂಕಿನ ಸುಲ್ತಾನ್‍ಪುರದ ಜೆ.ಎಸ್.
ಸಂಡೂರು : ಜುಲೈ 28ರಂದು `ನಿಧಿ ಆಪ್ಕೆ ನಿಕಟ್’


ಬಳ್ಳಾರಿ, 15 ಜುಲೈ (ಹಿ.ಸ.) :

ಆ್ಯಂಕರ್ : ಕಾರ್ಮಿಕರ ಭವಿಷ್ಯ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಅಂಶದಡಿ ‘ನಿಧಿ ಆಪ್ಕೆ ನಿಕಟ್’ ಜುಲೈ 28 ರ ಸೋಮವಾರ ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಸಂಡೂರು ತಾಲ್ಲೂಕಿನ ಸುಲ್ತಾನ್‍ಪುರದ ಜೆ.ಎಸ್.ಡಬ್ಲ್ಯೂ ಲಿಮಿಟೆಡ್ ನಲ್ಲಿ ಆಯೋಜಿಸಲಾಗಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಆಯುಕ್ತ ಕೆ.ವಿ ಪ್ರವೀಣ್ ಅವರು ತಿಳಿಸಿದ್ದಾರೆ.

ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರರ ಕುಂದು ಕೊರತೆ ಪರಿಹಾರ, ಮಾಹಿತಿ ವಿನಿಮಯ ಮಾಡಿಕೊಳ್ಳಬಹುದು. ಉದ್ಯೋಗದಾತರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರು ಆನ್‍ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆ ಕ್ರಮಗಳ ಕುರಿತು ಮಾಹಿತಿ ಒದಗಿಸುವ ಕಾರ್ಯಕ್ರಮವಾಗಿದೆ.

ಕಾರ್ಮಿಕರು, ಪಿಂಚಣಿದಾರರು, ಉದ್ಯೋಗದಾತರು ಜು.28 ರಂದು ನಡೆಯುವ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande