ಉಡುಪಿ, 15 ಜುಲೈ (ಹಿ.ಸ.) :
ಆ್ಯಂಕರ್ : ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ, ಮೂವರು ಮೀನುಗಾರರು ನೀರುಪಾಲಾದ ದುರ್ಘಟನೆ ನಡೆದಿದೆ.
ನೀರುಪಾಲಾದವರು ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38) ಮತ್ತು ಜಗದೀಶ್ ಖಾರ್ವಿ (36) ಎನ್ನಲಾಗಿದೆ. ಅರಬ್ಬಿ ಸಮುದ್ರದಲ್ಲಿ ತೀವ್ರ ಅಲೆಗಳ ಹಿನ್ನೆಲೆಯಲ್ಲಿ ದೋಣಿ ವಾಪಸ್ ಆಗುವ ಸಂದರ್ಭದಲ್ಲಿ ಮಗುಚಿದ್ದು, ಈ ವೇಳೆ ಓರ್ವ ನೀರಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಮುಂದಾದ ಇತರ ಇಬ್ಬರೂ ನೀರುಪಾಲಾಗಿದ್ದಾರೆ.
ಘಟನೆ ಬಳಿಕ ತಕ್ಷಣವೇ ಕರಾವಳಿ ಭದ್ರತಾ ಪಡೆ ಹಾಗೂ ಸ್ಥಳೀಯರು ಸಮುದ್ರದಲ್ಲಿ ಹುಡುಕಾಟ ಆರಂಭಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa