ಸರಕಾರಿ ಗೌರವದೊಂದಿಗೆ ಹಿರಿಯ ನಟಿ ಬಿ. ಸರೋಜಾ ದೇವಿ ಅಂತ್ಯಕ್ರಿಯೆ
ರಾಮನಗರ, 15 ಜುಲೈ (ಹಿ.ಸ.) : ಆ್ಯಂಕರ್ : ಹಿರಿಯ ನಟಿ ಬಿ. ಸರೋಜಾ ದೇವಿ ಅವರ ಅಂತ್ಯಕ್ರಿಯೆ ಇಂದು ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲೇ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಯಿತು. ಜುಲೈ 14ರಂದು ಬೆಂಗಳ
Final


ರಾಮನಗರ, 15 ಜುಲೈ (ಹಿ.ಸ.) :

ಆ್ಯಂಕರ್ : ಹಿರಿಯ ನಟಿ ಬಿ. ಸರೋಜಾ ದೇವಿ ಅವರ ಅಂತ್ಯಕ್ರಿಯೆ ಇಂದು ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲೇ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಯಿತು.

ಜುಲೈ 14ರಂದು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಅವರು ನಿಧನರಾಗಿದ್ದರು. ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು, ನಂತರ ಪುಷ್ಪಾಲಂಕೃತ ವಾಹನದಲ್ಲಿ ದಶವಾರಕ್ಕೆ ತರಲಾಯಿತು. ದಾರಿ ಮಧ್ಯೆ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು.

ಅಂತಿಮ ವಿಧಿವಿಧಾನಗಳಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಶಾಸಕ ಸಿ.ಪಿ. ಯೋಗೇಶ್ವರ್, ಚಿತ್ರರಂಗದ ಗಣ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದರು. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande