ಕೊಪ್ಪಳ, 16 ಜುಲೈ (ಹಿ.ಸ.) :
ಆ್ಯಂಕರ್ : ಎನ್‍ಎಸ್‍ಪಿ ವಿದ್ಯಾರ್ಥಿ ವೇತನದಡಿ 2025-26ನೇ ಸಾಲಿನಲ್ಲಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 31 ಕೊನೆಯ ದಿನವಾಗಿದ್ದು, ಮೆಟ್ರಿಕ್ ನಂತರದ ಹಾಗೂ ಉನ್ನತ ತರಗತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕೆಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಜಿಗಳನ್ನು ವೆಬ್‍ಸೈಟ್ National Scholarship Portal(NSP) ನಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಎಂ.ಆರ್.ಡಬ್ಲ್ಯೂ ಗಳಾದ ಜಯಶ್ರೀ, ಕೊಪ್ಪಳ: 9980126391, ಶಶಿಕಲಾ, ಯಲಬುರ್ಗಾ: 8147749523, ಶರಣಯ್ಯ, ಕುಕನೂರು: 9886240203, ಚಂದ್ರಶೇಖರ, ಕುಷ್ಟಗಿ: 9916308585, ಮಂಜುಳಾ, ಗಂಗಾವತಿ, ಕನಕಗಿರಿ ಮತ್ತು ಕಾರಟಗಿ: 7975398202 ಇವರನ್ನು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂ ಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್