ಬೆಂಗಳೂರು, 16 ಜುಲೈ (ಹಿ.ಸ.) :
ಆ್ಯಂಕರ್ : ಕಿತ್ತಕನೂರು ಜಾಗ ವಿವಾದ ಹಿನ್ನೆಲೆ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆಗೀಡಾಗಿದ್ದು, ಈ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮೃತನ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನಂತೆ, ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತಿತರರು ಬೈರತಿ ಬಸವರಾಜ್ ಅವರ ಕುಮ್ಮಕಿನಿಂದ ಶಿವಪ್ರಕಾಶ್‌ರನ್ನು ಲಾಂಗ್, ಮಚ್ಚಿನಿಂದ ಹೊಡೆದು ಉದ್ದೇಶಪೂರ್ವಕವಾಗಿ ಹತ್ಯೆಗೈದಿದ್ದಾರೆ. ಜಾಗ ವಿವಾದದ ಹಿನ್ನೆಲೆಯಲ್ಲಿ ಶಿವಪ್ರಕಾಶ್‌ಗೆ ಹಲವು ಬಾರಿ ಜೀವ ಬೆದರಿಕೆ ಹಾಕಲಾಗಿತ್ತು ಎಂಬುದು ದೂರಿನಲ್ಲಿದೆ ಉಲ್ಲೇಖಿಸಲಾಗಿದೆ.
ಈ ಹಿಂದೆ ಫೆಬ್ರವರಿ 21ರಂದು ಶಿವಪ್ರಕಾಶ್ ಕೂಡ ಜಗದೀಶ್ ಮತ್ತು ಇತರರ ವಿರುದ್ಧ ಜೀವ ಬೆದರಿಕೆ ಕುರಿತು ದೂರು ನೀಡಿದ್ದರು. ಸದ್ಯ ಪ್ರಕರಣದಲ್ಲಿ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa