ಧಾರವಾಡ, 16 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ‘ಮಿಷನ್ ವಿದ್ಯಾಕಾಶಿ’ ಯೋಜನೆಯಡಿ ಶಾಲೆಗೆ ಗೈರಾಗಿರುವ ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಶಾಲೆಗೆ ಮರಳಿಸಲು ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷ ಚಟುವಟಿಕೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಉತ್ತೀರ್ಣತೆ ಶೇ. 40ಕ್ಕಿಂತ ಕಡಿಮೆಯಿದ್ದು, ತಕ್ಷಣದ ಕ್ರಮ ಅಗತ್ಯವಾಗಿದೆ ಎಂದರು.
ಜಿಲ್ಲೆಯಲ್ಲಿ 2024-25 ನೇ ಸಾಲಿಗೆ ಒಟ್ಟು 3.39 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿದ್ದಾರೆ. ಈ ಎಲ್ಲಾ ಮಕ್ಕಳ ಹಾಜರಾತಿ ಖಚಿತಪಡಿಸಿಕೊಳ್ಳಲು, ಗ್ರಾಮ ಮಟ್ಟದ ತಂಡ ರಚನೆ, ಮನೆಮನೆಗೆ ಭೇಟಿ, ಶಾಲಾ ಹಾಜರಾತಿ ಪರಿಗಣನೆ ಮತ್ತು ಪೋಷಕರ ಮನ ಒಲಿಸುವ ಕೆಲಸ ಮಾಡಲಾಗುತ್ತದೆ.
ಶಿಕ್ಷಕರಿಗೆ ಶಿಕ್ಷಣೇತರ ಕಾರ್ಯಭಾರ ಕಡಿಮೆ ಮಾಡಿ, ಶೈಕ್ಷಣಿಕ ಚಟುವಟಿಕೆಗಳ ಮೇಲೆ ಹೆಚ್ಚಿನ ಒತ್ತುಕೊಡಲಾಗುತ್ತದೆ. ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa