ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ವಿಜಯಪುರ, 16 ಜುಲೈ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದಿಂದ ವಿಕಲಚೇತನರ ಸಬಲೀಕರಣಕ್ಕಾಗಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ : 31-07-2025 ಕೊನೆಯ ದಿನವಾಗಿದ್ದು, 2 ಪಾಸ್
ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ


ವಿಜಯಪುರ, 16 ಜುಲೈ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದಿಂದ ವಿಕಲಚೇತನರ ಸಬಲೀಕರಣಕ್ಕಾಗಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ : 31-07-2025 ಕೊನೆಯ ದಿನವಾಗಿದ್ದು, 2 ಪಾಸ್ ಪೋರ್ಟ ಅಳತೆಯ ಭಾವಚಿತ್ರ (ವ್ಯಕ್ತಿ ವಿಭಾಗ), ಒಂದು ಪುಟಕ್ಕೆ ಮೀರದಷ್ಟು ಅರ್ಜಿದಾರರ ವ್ಯಕ್ತಿ, ಸಂಸ್ಥೆಗಳಿಂದ ಸ್ವ-ವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ ಹಾಗೂ ಇತರೆ ದಾಖಲೆಗಳೊಂದಿಗೆ ಅರ್ಜಿಯನ್ನು www.awards.gov.in ಹಾಗೂ www.depwd.gov.in ವೆಬ್‍ಸೈಟ್‍ನಲ್ಲಿ ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ತಮ್ಮ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಆವರಣ ವಿಜಯಪುರ ಕಚೇರಿಗೆ ಸಲ್ಲಿಸಬೇಕು.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂ: 08352-796060 ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande