ಕಾಮಗಾರಿಯಲ್ಲಿ ಗುಣಮಟ್ಟ ಇರಲಿ : ಶಾಸಕ ನಾರಾ ಭರತರೆಡ್ಡಿ
ಬಳ್ಳಾರಿ, 16 ಜುಲೈ (ಹಿ.ಸ.) : ಆ್ಯಂಕರ್ : ಡಿಎಆರ್‍ನ 36 ಪೊಲೀಸ್ ಸಿಬ್ಬಂದಿಗಳಿಗೆ 8 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಶಾಸಕ ನಾರಾ ಭರತರೆಡ್ಡಿ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದ್ದಾರೆ. ಶಾಸಕ ನಾರಾ ಭರತರೆಡ್ಡಿ ಅವರು, ಹಗಲು
ಕಾಮಗಾರಿಯಲ್ಲಿ ಗುಣಮಟ್ಟ ಇರಲಿ : ಶಾಸಕ ನಾರಾ ಭರತರೆಡ್ಡಿ


ಕಾಮಗಾರಿಯಲ್ಲಿ ಗುಣಮಟ್ಟ ಇರಲಿ : ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ, 16 ಜುಲೈ (ಹಿ.ಸ.) :

ಆ್ಯಂಕರ್ : ಡಿಎಆರ್‍ನ 36 ಪೊಲೀಸ್ ಸಿಬ್ಬಂದಿಗಳಿಗೆ 8 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಶಾಸಕ ನಾರಾ ಭರತರೆಡ್ಡಿ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದ್ದಾರೆ.

ಶಾಸಕ ನಾರಾ ಭರತರೆಡ್ಡಿ ಅವರು, ಹಗಲು ರಾತ್ರಿ ನಮ್ಮನ್ನೆಲ್ಲಾ ರಕ್ಷಿಸುತ್ತಿರುವ ಪೊಲೀಸರು ಮತ್ತು ಅವರ ಕುಟುಂಬಗಳ ನೆಮ್ಮದಿಗಾಗಿ ಮನೆಗಳ ಅಗತ್ಯವಿದೆ. 8 ಕೋಟಿ ರೂಪಾಯಿ ವೆಚ್ಚದಲ್ಲಿ 36 ವಸತಿಗೃಹಗಳ ನಿರ್ಮಾಣ ಆಗುತ್ತಿದೆ. ಕಾಮಗಾರಿಯಲ್ಲಿ ಗುಣಮಟ್ಟ, ತ್ವರಿತವಾಗಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ತಿಳಿಸಲಾಗಿದೆ ಎಂದರು.

ಬಳ್ಳಾರಿ ವಲಯ ಐಜಿಪಿ ವರ್ತಿಕಾ ಕಟಿಯಾರ್, ಎಸ್ಪಿ ಡಾ. ಶೋಭಾರಾಣಿ, ಎಎಸ್ಪಿ ರವಿಕುಮಾರ್, ಡಿಎಸ್ಪಿ ನಂದಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಚಾನಾಳ್ ಶೇಖರ್, ಹಗರಿ ಗೋವಿಂದ ಇನ್ನಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande