ವಿಜಯಪುರ, 16 ಜುಲೈ (ಹಿ.ಸ.) :
ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರು ದಿ.18 ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಮ.12ಗಂ. ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.
ಮ.1ಗಂ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ನಂತರ ಮ.3ಗಂ. ತಿಕೋಟಾ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.2ಕಿ.ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ. ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande