ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶ
ಬಳ್ಳಾರಿ, 16 ಜುಲೈ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶ


ಬಳ್ಳಾರಿ, 16 ಜುಲೈ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ಗೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿಗೆ ರೂ.1 ಲಕ್ಷ ಒಳಗಿರಬೇಕು.

ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande