ವಿಜಯಪುರ, 16 ಜುಲೈ (ಹಿ.ಸ.) :
ಆ್ಯಂಕರ್ : ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಪರೀಕ್ಷೆಯ ಮೌಲ್ಯಮಾಪನವು ನಗರದ ಫಿನಿಕ್ಸ ಪ್ರೌಢ ಶಾಲೆ, ಸ್ನೇಹ ಸಂಗಮ ಪ್ರೌಢ ಶಾಲೆ ಹಾಗೂ ಮರಾಠಿ ವಿದ್ಯಾಲಯದಲ್ಲಿ ದಿನಾಂಕ:17-07-2025 ರಿಂದ 21-07-2025ರವರೆಗೆ ನಡೆಯಲಿದೆ.
ಸದರಿ ಮೌಲ್ಯಮಾಪನ ಕೇಂದ್ರಗಳ 200 ಮೀಟರ ಸುತ್ತಮುತ್ತಲಿನ ಪ್ರದೇಶದಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande