ಕ್ವಾಂಟಮ್ ರೋಡ್ ಮ್ಯಾಪ್ ಸಮಿತಿ ಸಭೆ
ಬೆಂಗಳೂರು, 16 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯವನ್ನು ದೇಶದ ಕ್ವಾಂಟಮ್‌ ಹಬ್‌ ಆಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ರೋಡ್‌ ಮ್ಯಾಪ್‌ ತಯಾರಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌
Meeting


ಬೆಂಗಳೂರು, 16 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯವನ್ನು ದೇಶದ ಕ್ವಾಂಟಮ್‌ ಹಬ್‌ ಆಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ರೋಡ್‌ ಮ್ಯಾಪ್‌ ತಯಾರಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು, ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್‌, ಐಟಿ, ಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಪಾಲ್ಗೊಂಡಿದ್ದರು.

ಸಭೆಯಲ್ಲಿ ಐಟಿಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿಗಳಾದ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗಳಾದ ಸೆಲ್ವ ಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣಾ, ಕ್ರಿಸ್ ಗೋಪಾಲಕೃಷ್ಣ, ಐಬಿಎಂ, ಎಲ್&ಟಿ, ಕ್ಯೂ ಪೈ ಎಐ ಕಂಪನಿಯ ಪ್ರತಿನಿಧಿಗಳು ಸೇರಿದಂತೆ ಕ್ವಾಂಟಮ್‌ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಮುಖರು ಉಪಸ್ಥಿತರಿದ್ದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande