ಧಾರವಾಡ, 16 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ಕೃಷಿ ಇಲಾಖೆಯ 2025-26 ನೇ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಚಾಲನಾ ಸಮಿತಿಯ ಆತ್ಮ ಯೋಜನೆ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಿಇಒ
ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಆತ್ಮ ಯೋಜನೆಯು ಕೃಷಿ ಇಲಾಖೆಯ ವಿನೂತನ ಯೋಜನೆಯಾಗಿದ್ದು ರೈತರಿಗೆ ನವೀನ ತಾಂತ್ರಿಕತೆಯನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ತಿಳಿಸಿದರು.
ಆಧುನಿಕ ಕೃಷಿ ಪದ್ಧತಿ ಅನುಸರಣೆಯಲ್ಲಿ ರೈತರಿಗೆ ಬೇಕಾದ ಕೃಷಿ ತಂತ್ರಜ್ಞಾನದ ಬಗ್ಗೆ ಮತ್ತು ವೈವಿಧ್ಯ ಮಾರುಕಟ್ಟೆ ಬೇಡಿಕೆ, ರಫ್ತು ಮಾಹಿತಿ ವ್ಯಾಪಕವಾಗಿ ಪ್ರಚಾರ ಮಾಡಲು ಕೃಷಿ ಅಧಿಕಾರಿಗಳಿಗೆ ಸೂಚಿದರು.
ರೈತ ಮಹಿಳೆಯರ ಗುಂಪುಗಳನ್ನು ರಚಿಸಿ ಕೌಶಲ್ಯ ತರಬೇತಿಯನ್ನು ಗ್ರಾಮ ಪಂಚಾಯಿತಿ ಮಹಿಳಾ ಸಂಘದವರಿಗೆ ನೀಡುವಂತೆ ಸಂಯೋಜಕರಿಗೆ ಸೂಚಿಸಿದರು.
ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ತರಬೇತಿ, ಕ್ಷೇತ್ರ ಅಧ್ಯಯನ ಪ್ರವಾಸ, ರೈತ ಪಾಠ ಶಾಲೆಗಳು ಹಾಗೂ ಪ್ರಾತ್ಯಕ್ಷಿಕೆಗಳನ್ನು ಕೃಷಿ ಅಭಿವೃದ್ಧಿಯಲ್ಲಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಅತ್ಯಂತ ಪರಿಣಾಮಕಾರಿಯಾದ ವಿಸ್ತರಣಾ ಸೇವೆಯನ್ನು ಆತ್ಮ ಜಿಲ್ಲಾ ಮಟ್ಟದ ಸಮಿತಿ ಭಾಗವಹಿಸಲು ತಿಳಿಸದರು.
ಕೃಷಿ ಹಾಗೂ ಕೃಷಿಯೇತರ ಇಲಾಖೆಗಳನ್ನು ಒಗ್ಗೂಡಿಸಿಕೊಂಡು ರೈತರಿಗೆ ಪ್ರೋತ್ಸಾಹ ಹಾಗೂ ಉತ್ತೇಜನಕ್ಕಾಗಿ ಕೃಷಿ ಪ್ರಶಸ್ತಿಗಳನ್ನು ನೀಡಲು ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಿ ಎಸ್ ಮೂಗನೂರುಮಠ್, ಜಂಟಿ ಕೃಷಿ ನಿರ್ದೇಶಕರು,ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು, ರೈತರು,ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa