ಸಿರುಗುಪ್ಪ : ನಾಳೆ ವಿದ್ಯುತ್‌ ವ್ಯತ್ಯಯ
ಸಿರುಗುಪ್ಪ, 16 ಜುಲೈ (ಹಿ.ಸ.) : ಆ್ಯಂಕರ್ : 33 ಕೆ.ವಿ ಹಚ್ಚೋಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 18 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 33/11 ಕೆವಿ ಹಚ್ಚೋಳ್ಳಿ ವಿದ್ಯುತ್ ವಿತರಣ
ಸಿರುಗುಪ್ಪ : ನಾಳೆ ವಿದ್ಯುತ್‌ ವ್ಯತ್ಯಯ


ಸಿರುಗುಪ್ಪ, 16 ಜುಲೈ (ಹಿ.ಸ.) :

ಆ್ಯಂಕರ್ : 33 ಕೆ.ವಿ ಹಚ್ಚೋಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 18 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

33/11 ಕೆವಿ ಹಚ್ಚೋಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಹಚ್ಚೋಳ್ಳಿ, ಕುಡುದರಹಾಳ್, ಬೀರಳ್ಳಿ, ರಾವಿಹಾಳ್‌, ಬಿ.ಎಂ ಸೂಗೂರು ಗ್ರಾಮ ಪಂಚಾಯಿತಿಗಳಿಗೆ ಸಂಬಂಧಪಟ್ಟ ವಿವಿಧ ಗ್ರಾಮಗಳಲ್ಲಿ ಮತ್ತು ಶ್ರೀರಂಗ ಎಂಟರ್ಪ್ರೈಸಸ್‌ ಸ್ಥಾವರಕ್ಕೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಲಿದೆ. ಗ್ರಾಹಕರು ಸಹಕರಿಸುವಂತೆ ಜೆಸ್ಕಾಂನ ಸಿರುಗುಪ್ಪ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತತರು ಈ ಮೂಲಕ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande