ಬೆಂಗಳೂರು, 16 ಜುಲೈ (ಹಿ.ಸ.) :
ಆ್ಯಂಕರ್ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಗೃಹ ಸಚಿವ ಜಿ.ಪರಮೇಶ್ವರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭೇಟಿ ಮಾಡಿದರು.
ಈ ವೇಳೆ ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗಿದೆ ಎಂದು ಪರಮೇಶ್ವರ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa