ಬೊಕೊರೊ, 16 ಜುಲೈ (ಹಿ.ಸ.) :
ಆ್ಯಂಕರ್ : ಜಾರ್ಖಂಡ್ ನ ಗೋಮಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಬಿರ್ಹೋರ್ಡೆರಾ ಅರಣ್ಯದಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದು, ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ.
ಬಿರ್ಹೋರ್ಡೆರಾ ಅರಣ್ಯದಲ್ಲಿ ನಕ್ಸಲರು ಅಡಗಿರುವ ಕುರಿತು ಖಚಿತ ಮಾಹಿತಿ ಮೇರೆಗೆ ನಡೆದ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಈ ಗುಂಡಿನ ಚಕಮಕಿಯಲ್ಲಿ ಸಿಆರ್ಪಿಎಫ್ನ ಕೊಬ್ರಾ ಪಡೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಬೊಕೊರೊ ವಲಯದ ಐಜಿ ಕ್ರಾಂತಿ ಕುಮಾರ್ ಗದಿದೆಸಿ ತಿಳಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa