ನವದೆಹಲಿ, 16 ಜುಲೈ (ಹಿ.ಸ.) :
ಆ್ಯಂಕರ್ : ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಮರಳಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಸಾಧನೆಗೆ ಕೇಂದ್ರ ಸಚಿವ ಸಂಪುಟ ಶ್ಲಾಘನೆ ವ್ಯಕ್ತಪಡಿಸಿದೆ.
ಶುಕ್ಲಾ ಅವರು ಐಎಸ್ಎಸ್ ನಲ್ಲಿ 18 ದಿನಗಳ ಕಾಲ ವಿಜ್ಞಾನಾತ್ಮಕ ಪ್ರಯೋಗಗಳಲ್ಲಿ ಭಾಗವಹಿಸಿ, ಬಾಹ್ಯಾಕಾಶ ನಿಲ್ದಾಣಕ್ಕೆ ಕಾಲಿಟ್ಟ ಮೊದಲ ಭಾರತೀಯರಾಗಿದ್ದಾರೆ. ಈ ಯಶಸ್ಸು ಭಾರತಕ್ಕೆ ಹೊಸ ಬಾಹ್ಯಾಕಾಶ ಅಧ್ಯಾಯವನ್ನು ತರುತ್ತದೆ ಎಂದು ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿನ ಸಂಪುಟ ಸಭೆ ಅಭಿಪ್ರಾಯಪಟ್ಟಿದೆ.
ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳ ತಂಡಕ್ಕೂ ಸಂಪುಟ ಅಭಿನಂದನೆ ಸಲ್ಲಿಸಿದ್ದು, ಈ ಸಾಧನೆ ಭಾರತವನ್ನು ಮಾನವ ಬಾಹ್ಯಾಕಾಶ ಯೋಜನೆಗಳಲ್ಲಿ ಶಕ್ತಿಶಾಲಿ ರಾಷ್ಟ್ರಗಳ ಸಾಲಿಗೆ ಸೇರಿಸುತ್ತಿದೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa