ಗದಗ, 17 ಜುಲೈ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪರ್ಸಿಯನ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ತರಬೇತಿ ಶಿಷ್ಯವೇತನ ಪಡೆಯಲು ಇಚ್ಛೆಯುಳ್ಳ ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30.09.2025 ಆಗಿದ್ದು ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಖುದ್ದಾಗಿ ಅಭ್ಯರ್ಥಿಗಳೇ ಹಾಜರಾಗಿ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಈ ಕಚೇರಿಗೆ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರುಬೇಕು. ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ಪೋಷಕರ ವಾರ್ಷಿಕ ಗರಿಷ್ಟ ವರಮಾನ ರೂ 2.50ಲಕ್ಷ ಇರಬೇಕು. ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯಾನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ವಿದ್ಯಾರ್ಥಿಗಳು ಸದರಿ ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಐ.ಎನ್.ಸಿ ಮಾನ್ಯತೆ ಪಡೆದ ಶಾಲೆ/ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ. ಪ್ಯಾರಾ ಮೆಡಿಕಲ್ ಕಾಲೇಜುಗಳು ಪ್ಯಾರಾ ಮೆಡಿಕಲ್ ಬೋರ್ಡಿನಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಜಿಲ್ಲೆ ಗದಗ ಈ ಕಚೇರಿಯನ್ನು ಸಂಪರ್ಕಿಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP