ಬೆಂಗಳೂರು, 17 ಜುಲೈ (ಹಿ.ಸ.) :
ಆ್ಯಂಕರ್ : ಉಡುಪಿಯ ಬೈಂದೂರಿನಲ್ಲಿ 2 ದಿನಗಳ ಹಿಂದೆ ಮೀನುಗಾರಿಕೆಯ ದೋಣಿ ಮುಗುಚಿ ಮೂವರು ಮೀನುಗಾರರು ನೀರಿನಲ್ಲಿ ನಾಪತ್ತೆಯಾಗಿ, ಸಾವನ್ನಪ್ಪಿರುವುದು ಅತ್ಯಂತ ದುರದೃಷ್ಟಕರ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.
ದುಃಖದ ಈ ಸಮಯದಲ್ಲಿ ಮೃತರ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿಯಾದ್ದೇನೆ. ಅಗಲಿದ ಆತ್ಮಗಳಿಗೆ ಭಗವಂತ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಹಾಗೂ ಕುಟುಂಬಸ್ಥರು ಯಾವುದೇ ಕಾರಣಕ್ಕೆ ಧೈರ್ಯವನ್ನು ಕಳೆದುಕೊಳ್ಳಬೇಡಿ ಎಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದು,
ಶೀಘ್ರದಲ್ಲಿ ಉಡುಪಿ ಜಿಲ್ಲೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ತುಂಬುವ ಕೆಲಸ ಮಾಡಲಿದ್ದೇನೆ. ಜೊತೆಗೆ ಸರ್ಕಾರದಿಂದ ನಿಯಮಾನುಸಾರ ಪರಿಹಾರ ಒದಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa