ಕಾಂಗ್ರೆಸ್ ಯೋಜನೆ ನಕಲು ಮಾಡುವುದೇ ಬಿಜೆಪಿ ಕೆಲಸ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ
ಬೆಂಗಳೂರು, 17 ಜುಲೈ (ಹಿ.ಸ.) : ಆ್ಯಂಕರ್ : ಬಿಜೆಪಿಯವರು ಮಾತನಾಡುವುದು ಒಂದು, ಮಾಡುವುದು ಮತ್ತೊಂದು. ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಹೊಡೆದು ಪಾಸಾಗಿರುವ ಸ್ಟೂಡೆಂಟ್ಸ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ. ಮುಂಬರುವ ಬಿಹಾರ ಚುನಾವಣೆಗೆ
Hebalkar


ಬೆಂಗಳೂರು, 17 ಜುಲೈ (ಹಿ.ಸ.) :

ಆ್ಯಂಕರ್ : ಬಿಜೆಪಿಯವರು ಮಾತನಾಡುವುದು ಒಂದು, ಮಾಡುವುದು ಮತ್ತೊಂದು. ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಹೊಡೆದು ಪಾಸಾಗಿರುವ ಸ್ಟೂಡೆಂಟ್ಸ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.

ಮುಂಬರುವ ಬಿಹಾರ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಘೋಷಿಸಿರುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ನರೇಗಾ, ಆಧಾರ್ ಕಾರ್ಡ್ ಜಾರಿಗೆ ತರುವುದನ್ನು ವಿರೋಧ ಮಾಡಿದ್ದರು. ದೇಶದಲ್ಲಿ ಉತ್ತಮ ಯೋಜನೆಗಳನ್ನು ವಿರೋಧಿಸಿದರು. ಆದರೀಗ ನಮ್ಮ ಯೋಜನೆಗಳನ್ನೇ ಅನುಸರಿಸುತ್ತಿದ್ದಾರೆ ಎಂದರು.

ಮಹಿಳಾ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆಗಳನ್ನು ಮಾಡಿದ್ದೆವು. ಇದೀಗ ಕರ್ನಾಟಕದಲ್ಲಿ ಯಶಸ್ವಿಯಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದನ್ನು ನೋಡಿದ ಬಿಜೆಪಿಗರು, ಮಹಾರಾಷ್ಟ್ರ, ದೆಹಲಿಯಲ್ಲಿ ನಮ್ಮ ಯೋಜನೆಗಳನ್ನು ಘೋಷಣೆ ಮಾಡಿ ಚುನಾವಣೆ ಗೆದ್ದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.

ಕೇಂದ್ರದ ಬಿಜೆಪಿ ನಾಯಕರು ಕರ್ನಾಟಕಕ್ಕೆ ಬಂದಾಗಲೆಲ್ಲಾ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಾರೆ. ಆದರೆ, ಕರ್ನಾಟಕ ಮಾಡೆಲ್ ಇಟ್ಟುಕೊಂಡು ನರೇಂದ್ರ ಮೋದಿ ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕದ ಯೋಜನೆಗಳನ್ನ ಹಾಗೂ ಮಾಡೆಲ್ ಅನ್ನು ಟೀಕೆ ಮಾಡುವ ನೈತಿಕತೆ ಇದೆಯೇ ಎಂದು ಸಚಿವರು ಪ್ರಶ್ನಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande