ಬಳ್ಳಾರಿ, 17 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರದ ಅಧಿದೇವತೆ ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿಯ ೧೩ ಹುಂಡಿಗಳನ್ನು ತೆರೆದು ಹಣವನ್ನು ಎಣಿಕೆ ಮಾಡಿದಾಗ ಒಟ್ಟು ರೂ. 67,86,179 ಹಣ ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ.
ಬಳ್ಳಾರಿ ಸಹಾಯಕ ಆಯುಕ್ತರು ಹಾಗೂ ದೇವಸ್ಥಾನದ ಆಡಳಿತ ಅಧಿಕಾರಿ ಪ್ರಮೋದ್, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಎಚ್. ಸವಿತಾ ಮತ್ತು ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ - ಭಕ್ತಾದಿಗಳ ಸಮ್ಮುಖದಲ್ಲಿ ಹಣ ಎಣಿಕೆಯನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಈ ಮೊತ್ತವು ನಾಲ್ಕು ತಿಂಗಳ ಅವಧಿಯಲ್ಲಿ ಸಂಗ್ರಹ ವಾಗಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್