ಧಾರವಾಡ ಜಿಲ್ಲೆ ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ
ಧಾರವಾಡ, 17 ಜುಲೈ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ, ಸ್ವಚ್ಚ ಭಾರತ ಮಿಷನ್ (ಗ
Meeting


ಧಾರವಾಡ, 17 ಜುಲೈ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ, ಸ್ವಚ್ಚ ಭಾರತ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಕಾರ್ಯಾದೇಶ ಪಡೆದ ಫಲಾನುಭವಿಗಳು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಲಾಯಿತು. ವಿದ್ಯುತ್ ಬಿಲ್ ಮರು ಹೊಂದಾಣಿಕೆ ಕುರಿತು ಹೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.

ಗ್ರಂಥಾಲಯ ಉಪಕರ ಮತ್ತು ಬಾಕಿ ಕರ ವಸೂಲಾತಿಯಲ್ಲಿ ಪ್ರತಿ ತಿಂಗಳು ಶೇ.10 ರಷ್ಟು ಗುರಿ ನಿಗದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಯಿತು. ಇ-ಗ್ರಾಮಸ್ವರಾಜ್ ಹಾಗೂ ಇ-ಸ್ವತ್ತು ತಂತ್ರಾಂಶದ ಅನುಷ್ಠಾನ, ಬಾಕಿ ಅರ್ಜಿಗಳ ವಿಲೇವಾರಿ ಕುರಿತು ಕ್ರಮಕೈಗೊಳ್ಳಬೇಕು ಎಂದು ಸೂಚಿಸಲಾಯಿತು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಶೇ.50 ಕ್ಕಿಂತ ಕಡಿಮೆಯಿರುವ ಗ್ರಾಮ ಪಂಚಾಯಿತಿಗಳು ಹೆಚ್ಚಿನ ಗಮನ ಹರಿಸಬೇಕೆಂದು ಸೂಚನೆ ನೀಡಲಾಯಿತು. ಬೂದು ನೀರು ನಿರ್ವಹಣೆ ಕಾಮಗಾರಿಗಳ ಡಿಪಿಆರ್ ಸಲ್ಲಿಸುವಂತೆ ಸೂಚನೆ ನೀಡಲಾಯಿತು.

ಪ್ರಧಾನಮಂತ್ರಿ ಆವಾಸ ಯೋಜನೆಯಡಿಯಲ್ಲಿ ಮಂಜೂರಾದ ಮನೆಗಳಿಗೆ ಎನ್ಎಂಆರ್ ಸೃಜನಕ್ಕೆ ತುರ್ತು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಯಿತು.

ಸಭೆಯಲ್ಲಿ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರುಮಠ್, ಯೋಜನಾ ನಿರ್ದೇಶಕಿ ರೇಖಾ ಡೋಳ್ಳಿನ್, ಮುಖ್ಯ ಯೋಜನಾ ಅಧಿಕಾರಿ ದೀಪಕ್ ಮಡಿವಾಳ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande