ಕಾರ್ಮಿಕ ಸಚಿವ ಸಂತೋಷ ಎಸ್ ಲಾಡ್ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಗದಗ, 17 ಜುಲೈ (ಹಿ.ಸ.) : ಆ್ಯಂಕರ್ : ಕಾರ್ಮಿಕ ಇಲಾಖೆ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಜುಲೈ 18 ರಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 10 ಗಂಟೆಗೆ ಗದಗ ಜಿಲ್ಲೆಗೆ ಆಗಮಿಸಿ, ಗದಗ ಎಪಿಎಂಸಿ ಯಾರ್ಡದ ಸ್ವಾಮಿ ವಿವೇಕಾನಂದ ಸಭ
ಪೋಟೋ


ಗದಗ, 17 ಜುಲೈ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಇಲಾಖೆ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಜುಲೈ 18 ರಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 10 ಗಂಟೆಗೆ ಗದಗ ಜಿಲ್ಲೆಗೆ ಆಗಮಿಸಿ, ಗದಗ ಎಪಿಎಂಸಿ ಯಾರ್ಡದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಗದಗ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ ಕಾರ್ಡ ವಿತರಣೆ ಮತ್ತು ಸ್ಮಾರ್ಟ ಕಾರ್ಡ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 1.30 ಗಂಟೆಗೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 2 ಗಂಟೆಗೆ ಗದುಗಿನಿಂದ ಕೊಪ್ಪಳಕ್ಕೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande