ಜು. 22 ರಂದು ಕೊಪ್ಪಳದಲ್ಲಿ ಹಡಪದ ಅಪ್ಪಣ್ಣ ಜಯಂತಿ
ಕೊಪ್ಪಳ, 17 ಜುಲೈ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕ
ಜು. 22 ರಂದು ಕೊಪ್ಪಳದಲ್ಲಿ ಹಡಪದ ಅಪ್ಪಣ್ಣ ಜಯಂತಿ


ಕೊಪ್ಪಳ, 17 ಜುಲೈ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ತಿಳಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು.

ವಿಧಾನ ಸಭೆಯ ಪ್ರತಿ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಗಂಗಾವತಿಯ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಮುಮ್ತಾಜ್ ಬೇಗಂ ಅವರು ಹಡಪದ ಅಪ್ಪಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande