ರಾಯಚೂರು, 17 ಜುಲೈ (ಹಿ.ಸ.) :
ಆ್ಯಂಕರ್ : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಇವರಿಂದ ಪ್ರತಿ ವರ್ಷದ ಡಿಸೆಂಬರ್ 3ನೇ ದಿನಾಂಕದಂದು ಆಚರಿಸಲಾಗುತ್ತಿರುವ ರಾಷ್ಟ್ರಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ-2025ಯ ಅಂಗವಾಗಿ ವಿಕಲಚೇತನರ ಸಬಲೀಕರಣಕ್ಕಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಆಸಕ್ತರು ಅರ್ಜಿಯನ್ನು ವೆಬ್‍ಸೈಟ್ ವಿಳಾಸ: www.depwd.gov.in ಹಾಗೂ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ ವಿಳಾಸ: www.awards.gov.in ನಲ್ಲಿ ಜುಲೈ 31ರೊಳಗಾಗಿ ಸಲ್ಲಿಸಬಹುದಾಗಿದೆ. ಆನ್‍ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯನ್ನು ಈ ಇಲಾಖೆಗೆ ತ್ರಿ-ಪ್ರತಿಯ ಹಾರ್ಡ್ ಪ್ರತಿಗಳೊಂದಿಗೆ ಸಲ್ಲಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್