ರಾಯಚೂರು, 17 ಜುಲೈ (ಹಿ.ಸ.) :
ಆ್ಯಂಕರ್ : ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ಆವರಣದಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ಪಿಎಮ್‍ಎಫ್‍ಬಿವೈ) ವಿಮಾ ಯೋಜನೆಯ ಬಗ್ಗೆ ರೈತರಿಗೆ ಅರಿವು ಮೂಡಿಸುವ ಪ್ರಚಾರ ವಾಹನಕ್ಕೆ ಜಂಟಿ ಕೃಷಿ ನಿರ್ದೇಶಕರಾದ ಪ್ರಕಾಶ್ ಚವ್ಹಾಣ್ ಅವರು ಇತ್ತೀಚೆಗೆ ಚಾಲನೆ ನೀಡಿದರು.
ಈ ವೇಳೆ ಅವರು ಮಾತನಾಡಿ, ಭತ್ತ (ಮಳೆಯಾಶ್ರೀತ), ಹತ್ತಿ (ನೀರಾವರಿ), ಹತ್ತಿ (ಮಳೆಯಾಶ್ರೀತ), ತೊಗರಿ (ನೀರಾವರಿ), ತೊಗರಿ (ಮಳೆಯಾಶ್ರೀತ), ಸೂರ್ಯಕಾಂತಿ (ಮಳೆಯಾಶ್ರೀತ), ನೆಲಗಡಲೆ (ನೀರಾವರಿ), ನೆಲಗಡಲೆ (ಮಳೆಯಾಶ್ರೀತ), ಸಜ್ಜೆ (ನೀರಾವರಿ), ಸಜ್ಜೆ (ಮಳೆಯಾಶ್ರೀತ), ಎಳ್ಳು (ಮಳೆಯಾಶ್ರೀತ), ಹೆಸರು (ಮಳೆಯಾಶ್ರೀತ)ಗಳಿಗೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ. ಭತ್ತ (ನೀರಾವರಿ), ಮುಸುಕಿನ ಜೋಳ (ನೀರಾವರಿ), ಈರುಳ್ಳಿ (ನೀರಾವರಿ), ಸೂರ್ಯಕಾಂತಿ (ನೀರಾವರಿ) ಬೆಳೆಗೆ ಆಗಸ್ಟ್ 16 ವಿಮೆ ಮಾಡಿಸಲು ಕೊನೆಯ ದಿನವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕರಾದ ಜಯಪ್ರಕಾಶ್ ಸೇರಿದಂತೆ ರಾಯಚೂರು ತಾಲೂಕು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ದೀಪಾ ಕುಲಕರ್ಣಿ, ವಿಮಾ ಕಂಪನಿಯ ಪ್ರತಿನಿಧಿಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್