ರಾಯಚೂರು, 17 ಜುಲೈ (ಹಿ.ಸ.) :
ಆ್ಯಂಕರ್ : ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ 2026ನೇ ಸಾಲಿನ ನಾಮ ನಿರ್ದೇಶನಗಳನ್ನು ಸಲ್ಲಿಸ ಬಯಸುವವರು ಜುಲೈ 31 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಾಮ ನಿರ್ದೇಶನ ಸಲ್ಲಿsಸುವ ಪ್ರಕ್ರಿಯೆಯು ಈಗಾಗಲೇ ದಿನಾಂಕ 15-03-2025 ರಿಂದ ಪ್ರಾರಂಭವಾಗಿದ್ದು, ಪ್ರತಿಯೊಂದು ನಾಮ ನಿರ್ದೇಶನಗಳು ಮತ್ತು ಶಿಫಾರಸ್ಸುಗಳನ್ನು ರಾಷ್ಟ್ರೀಯ ಪುರಸ್ಕಾರ ಜಾಲತಾಣ
ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.
2026ರ ಪದ್ಮಶ್ರೀ ಪ್ರಶಸ್ತಿಗಳ ಕುರಿತು ಸಂಕ್ಷಿಪ್ತ ಮಾಹಿತಿ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು ವಿಶಿಷ್ಟ ಕಾರ್ಯವನ್ನು ಗುರುತಿಸಲು ಪ್ರಯತ್ನಿಸುತ್ತದೆ. ಮತ್ತು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ಔಷಧ, ಸಾಮಾಜಿಕ ಕಾರ್ಯ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು/ ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಅಥವಾ ಸೇವೆಗಾಗಿ ನೀಡಲಾಗುತ್ತದೆ.
ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಿದ್ದು, 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ನಾಮನಿರ್ದೇಶನ ಅಥವಾ ಶಿಫಾರಸ್ಸುಗಳನ್ನು ಸಲ್ಲಿಸುವವರು ಪ್ರಕಟಿಸಲಾಗಿರುವ ಅರ್ಜಿ ಪತ್ರ ನಮೂನೆಯಲ್ಲಿ ಭರ್ತಿ ಮಾಡಿ ಆನ್‍ಲೈನ್ ಮುಖಾಂತರ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸರ್ಕಾರದ ಪತ್ರದಲ್ಲಿ ತಿಳಿಸಲಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್