ಕುರುಗೋಡು : ಜು.19 ರಂದು ವಿದ್ಯುತ್ ವ್ಯತ್ಯಯ
ಕುರುಗೋಡು, 17 ಜುಲೈ (ಹಿ.ಸ.) : ಆ್ಯಂಕರ್ : ಕುರುಗೊಡು ಉಪ-ಕೇಂದ್ರ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆವಿ ಯ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಜು
ಕುರುಗೋಡು : ಜು.19 ರಂದು ವಿದ್ಯುತ್ ವ್ಯತ್ಯಯ


ಕುರುಗೋಡು, 17 ಜುಲೈ (ಹಿ.ಸ.) :

ಆ್ಯಂಕರ್ : ಕುರುಗೊಡು ಉಪ-ಕೇಂದ್ರ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆವಿ ಯ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಜು.19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

110/11ಕೆ.ವಿ ಕುರುಗೋಡು ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಫೀಡರ್‍ಗಳು ಮತ್ತು ಎಫ್-15 ಸೋಲಾರ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಜು.19 ರಂದು ಉಪ-ಕೇಂದ್ರದ ಎಲ್ಲಾ ಕೃಷಿ ಮಾರ್ಗಗಳನ್ನು ರಾತ್ರಿ 12 ಗಂಟೆಯಿಂದ ಬೆಳಿಗ್ಗೆ 07 ಗಂಟೆಯವರೆಗೆ ವಿದ್ಯುತ್ ಸರಬರಾಜು ಚಾಲನೆಗೊಳಿಸಲಾಗುವುದು.

ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande