ನಾಳೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ, 17 ಜುಲೈ (ಹಿ.ಸ.) : ಆ್ಯಂಕರ್ : ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 18 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಮಧ್ಯಾಹ್ನ 2 ಗಂಟೆಗೆ ಗದಗದಿಂದ ರಸ್ತೆಯ ಮೂಲಕ ಹೊರಟು, 3.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಹೊಸಪೇಟೆ ರಸ್
ನಾಳೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ


ಕೊಪ್ಪಳ, 17 ಜುಲೈ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 18 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಮಧ್ಯಾಹ್ನ 2 ಗಂಟೆಗೆ ಗದಗದಿಂದ ರಸ್ತೆಯ ಮೂಲಕ ಹೊರಟು, 3.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‍ನಲ್ಲಿ ನಡೆಯುವ ಕೊಪ್ಪಳ ಜಿಲ್ಲೆಯ

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಸಂಜೆ 5 ಗಂಟೆಗೆ ಪಕ್ಷದ ಕಛೇರಿಗೆ ಭೇಟಿ ನೀಡುವರು. ಬಳಿಕ ಅಂದು ಸಂಜೆ 6 ಗಂಟೆಗೆ ಕೊಪ್ಪಳದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande