ರಾಯಚೂರು, 17 ಜುಲೈ (ಹಿ.ಸ.) :
ಆ್ಯಂಕರ್ : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಜುಲೈ 18ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೃಷ್ಣಗೌಡ ತಾಯಣ್ಣವರು ತಿಳಿಸಿದ್ದಾರೆ.
ಬೆಂಗಳೂರಿನಿಂದ ಉದ್ಯಾನ್ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 18ರ ಬೆಳಿಗ್ಗೆ 4.13ಕ್ಕೆ ರಾಯಚೂರು ನಗರಕ್ಕೆ ಆಗಮಿಸುವ ಸಚಿವರು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ರಾಯಚೂರಿನಿಂದ ರಸ್ತೆ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್