ರಾಯಚೂರು, 17 ಜುಲೈ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿಯಾದ ನಾಗಲಕ್ಷ್ಮೀ ಗಂಡ ನಾಗೇಂದ್ರಪ್ಪ (46) ಕಾಣೆಯಾಗಿದ್ದಾರೆ ಎಂದು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ:127/2025 ಕಲಂನಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಿಳೆ ಚಹರಾ ಪಟ್ಟಿ: ಕಾಣೆಯಾದ ನಾಗಲಕ್ಷ್ಮೀ 8ನೇ ತರಗತಿ ಓದಿದ್ದು, ವಯಸ್ಸು 46 ವರ್ಷ, ಜಾತಿ ಕುರುಬರು, ಉದ್ಯೋಗ ಮನೆಕೆಲಸ ಮಾಡಿಕೊಂಡಿದ್ದಾರೆ. 5.4 ಅಡಿ ಎತ್ತರ, ಗೋಧಿ ಮೈ ಬಣ್ಣ, ಚಪ್ಪಟೆಯ ಮುಖ, ಕಪ್ಪುಕೂದಲು, ಗುಲಾಬಿ ಬಣ್ಣದ ಸೀರೆ ಹಾಗೂ ಕೆಂಪ್ಪು ಬಣ್ಣದ ಕುಪ್ಪಸ ಧರಿಸಿದ್ದು, ಕನ್ನಡ, ತೆಲುಗು ಹಾಗೂ ಹಿಂದಿ ಭಾಷೆ ಮಾತನಾಡುತ್ತಾಳೆ. ಈ ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯನ್ನು ಸಂಪರ್ಕ ಮಾಡುವಂತೆ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್