ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
ಮಂಗಳೂರು, 17 ಜುಲೈ (ಹಿ.ಸ.) : ಆ್ಯಂಕರ್ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಹೆದ್ದಾರಿಯು ಸಂಪೂರ್ಣವಾಗಿ ಮಣ್ಣಿನಿಂದ ಮುಚ್ಚಿಹೋಗಿದೆ. ಪರಿಣಾಮವಾಗಿ ಈ ಮಾರ್ಗದ ವಾಹನ ಸಂಚಾರ
Road close


ಮಂಗಳೂರು, 17 ಜುಲೈ (ಹಿ.ಸ.) :

ಆ್ಯಂಕರ್ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಹೆದ್ದಾರಿಯು ಸಂಪೂರ್ಣವಾಗಿ ಮಣ್ಣಿನಿಂದ ಮುಚ್ಚಿಹೋಗಿದೆ. ಪರಿಣಾಮವಾಗಿ ಈ ಮಾರ್ಗದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ರಸ್ತೆಯ ವಿಸ್ತರಣಾ ಕಾಮಗಾರಿಯ ಹಿನ್ನೆಲೆಯಲ್ಲಿ, ಈ ಭಾಗದ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೆ ಕತ್ತರಿಸಲಾಗಿತ್ತು. ಮಳೆಯ ಪರಿಣಾಮವಾಗಿ ಮಣ್ಣು ಸಡಿಲಗೊಂಡು ಮತ್ತೆ ಕುಸಿದಿದೆ. ಈ ಹಿಂದೆ ಹಲವು ಬಾರಿ ಇದೇ ಪ್ರದೇಶದಲ್ಲಿ ಗುಡ್ಡ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.

ಸ್ಥಳೀಯ ಪೊಲೀಸರು ಬದಲಿ ಮಾರ್ಗಗಳ ಮೂಲಕ ಸಂಚರಿಸಲು ಪ್ರಯಾಣಿಕರಿಗೆ ಸಲಹೆ ನೀಡಿದ್ದು, ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನಿಯಂತ್ರಣ ಕ್ರಮ ಕೈಗೊಂಡಿದ್ದಾರೆ. ಬೃಹತ್ ಯಂತ್ರಗಳ ಸಹಾಯದಿಂದ ಮಣ್ಣು ತೆರವುಗೊಳಿಸುವ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande