ತಾಯಿ ಮತ್ತು ಮಕ್ಕಳ ಆಸ್ಪತ್ರೆ : ಜು. 24ರಂದು ಶುಶ್ರೂಷಕ ಅಧಿಕಾರಿಗಳ ಹುದ್ದೆಗೆ ದಾಖಲಾತಿ ಪರಿಶೀಲನೆ
ಕುಕನೂರು, ಗಂಗಾವತಿ, 17 ಜುಲೈ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಯು ಜುಲೈ 24ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್
ತಾಯಿ ಮತ್ತು ಮಕ್ಕಳ ಆಸ್ಪತ್ರೆ : ಜು. 24ರಂದು ಶುಶ್ರೂಷಕ ಅಧಿಕಾರಿಗಳ ಹುದ್ದೆಗೆ ದಾಖಲಾತಿ ಪರಿಶೀಲನೆ


ಕುಕನೂರು, ಗಂಗಾವತಿ, 17 ಜುಲೈ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಯು ಜುಲೈ 24ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಹಾಗೂ ಗಂಗಾವತಿಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್‍ತಾಣ www.koppal.nic.in ನಲ್ಲಿ ಪ್ರಚುರಪಡಿಸಿದ್ದು, ಅಂತಿಮ ಆಯ್ಕೆ ಪಟ್ಟಿಗಯಲ್ಲಿರುವ ಅಭ್ಯರ್ಥಿಗಳು ತಾವು ಅಪ್‍ಲೋಡ್ ಮಾಡಿರುವ ಮೂಲ ದಾಖಾಲಾತಿ ಪರಿಶೀಲನೆಗಾಗಿ ಜು. 24ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಕೊಪ್ಪಳ ಇವರ ಕಾರ್ಯಾಲಯಕ್ಕೆ ಹಾಜರಾಗಬೇಕು ಎಂದರು.

ನಿಗದಿಪಡಿಸಿದ ದಿನಾಂಕದಂದು ಹಾಜರಾಗದೇ ಇರುವ ಅಭ್ಯರ್ಥಿಗಳನ್ನು ಬಿಟ್ಟು ಸಾಮಾನ್ಯ ಅರ್ಹಾತಾ ಪಟ್ಟಿಯಲ್ಲಿರುವ ಮುಂದಿನ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ನಂತರದಲ್ಲಿ ಬಂದ ಅಭ್ಯರ್ಥಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande