ಯುವ ಜನತೆ ನೈಸರ್ಗಿಕ ಆಹಾರವನ್ನು ಸೇವಿಸಬೇಕು
ವಿಜಯಪುರ, 17 ಜುಲೈ (ಹಿ.ಸ.) : ಆ್ಯಂಕರ್ : ಯುವ ಜನತೆ ಸಮತೋಲಿತ ಮತ್ತು ನೈಸರ್ಗಿಕ ಆಹಾರವನ್ನು ಸೇವಿಸುವ ಮೂಲಕ ದೈಹಿಕ ಸದೃಢತೆಯನ್ನು ಕಾಯ್ದುಕೊಳ್ಳಬೇಕು ಎಂದು ವೈದ್ಯೆ ಡಾ. ಪೂಜಾ ತೊದಲಬಾಗಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ
ಪೂಜಾ


ವಿಜಯಪುರ, 17 ಜುಲೈ (ಹಿ.ಸ.) :

ಆ್ಯಂಕರ್ : ಯುವ ಜನತೆ ಸಮತೋಲಿತ ಮತ್ತು ನೈಸರ್ಗಿಕ ಆಹಾರವನ್ನು ಸೇವಿಸುವ ಮೂಲಕ ದೈಹಿಕ ಸದೃಢತೆಯನ್ನು ಕಾಯ್ದುಕೊಳ್ಳಬೇಕು ಎಂದು ವೈದ್ಯೆ ಡಾ. ಪೂಜಾ ತೊದಲಬಾಗಿ ಹೇಳಿದ್ದಾರೆ.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಹಾಗೂ ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಉದ್ಙಾಟಿಸಿ ಅವರು ಮಾತನಾಡಿದರು.

ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಲು ಗುಣಮಟ್ಟದ ಆಹಾರ ಸೇವನೆ, ಕವಾಯತುಗಳನ್ನು ಮಾಡಬೇಕು. ಮಾನಸಿಕ ಒತ್ತಡವನ್ನು ನಿಭಾಯಿಸಲು ಮನೋವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಮೊಬೈಲ್ ವೀಕ್ಷಣೆಯನ್ನು ಕಡಿಮೆ ಮಾಡಬೇಕು. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಈ ಮೂಲಕ ಹೃದಯದ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಅವರು ಹೇಳಿದರು.

ಸಂಸ್ಥೆಯ ವಿದ್ಯಾರ್ಥಿಗಳ ಕಲ್ಯಾಣಾಧಿಕಾರಿ ಸೂರ್ಯಕಾಂತ ಬಿರಾದಾರ ಮಾತನಾಡಿ, ಗಡಿಭಾಗದ ವಿಜಯಪುರ ಜಿಲ್ಲೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಸಕಲ ಆರೋಗ್ಯ ಚಿಕಿತ್ಸೆಗಳು ಲಭ್ಯವವಿವೆ. ರಾಜ್ಯದಲ್ಲಿ ಈಗ ಯುವ ಜನತೆಯಲ್ಲಿ ಕಂಡು ಬರುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಲು ಎಂ. ಬಿ. ಪಾಟೀಲ ಫೌಂಡೇಶನ್ ನಾನಾ ಕಾಲೇಜುಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ, ಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ, ಡಾ. ಜೆ. ಎಸ್. ಪಟ್ಟಣಶೆಟ್ಟಿ, ಡಾ. ಬಿ. ಎಸ್. ಹಿರೇಮಠ, ಎಸ್. ಎಸ್. ಪಾಟೀಲ, ಪಿ. ಡಿ. ಮುಲ್ತಾನಿ ಮುಂತಾದವರು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿ ಪುಷ್ಪಾ ಮುರನಾಳ ನಿರೂಪಿಸಿದರು. ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande