ಮೈಸೂರು, 18 ಜುಲೈ (ಹಿ.ಸ.) :
ಆ್ಯಂಕರ್ : ಬಿಜೆಪಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ನಗರಪ್ರದೇಶದ ಮತದಾರರಲ್ಲಿ ಕಾಂಗ್ರೆಸ್ ಪರವಾದ ಒಲವು ಕಡಿಮೆ ಆಗುತ್ತಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಳಿನ ಕಾರ್ಯಕ್ರಮ ಯಾರದೇ ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಅದು ಅಭಿವೃದ್ಧಿಯ ಕಾರ್ಯಕ್ರಮ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa